ಪುತ್ತೂರು: ಯುವಕನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸುಳ್ಯಪದವಿನಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ತಾಲೂಕಿನ ಸುಳ್ಯಪದವು ಕನ್ನಡ್ಕ ನಿವಾಸಿ ಧನುಷ್(21) ಎನ್ನಲಾಗಿದೆ.
ಧನುಷ್ ಎ.22 ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ತೋಟದಲ್ಲಿದ್ದ ಬಾವಿಗೆ ಬಿದ್ದರೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧನುಷ್ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ನಡೆಸುತ್ತಿದ್ದು, ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಡೆದ ಹಿಂದೂ ಜಾಗರಣ ವೇದಿಕೆ ಸುಳ್ಯಪದವು ಘಟಕದಲ್ಲಿ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು.
ಮೃತರು ತಂದೆ ತಿಮ್ಮಪ್ಪ ಗೌಡ , ತಾಯಿ ಯಮುನಾ , ಸಹೋದರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.