ಮೈಸೂರು: ಪರೀಕ್ಷೆಗೆ ಹೆದರಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದಿದೆ.
ಹನುಮಂತ ನಗರದ ರಾಮು ಎಂಬವರ ಪುತ್ರಿ ಅನು(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅನು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಓದಿನಲ್ಲೂ ಸಹ ಇವರು ಮುಂದಿದ್ದರು ಎನ್ನಲಾಗಿದೆ.
ಪರೀಕ್ಷೆ ಇದೆ ಓದಿಕೊಳ್ಳಬೇಕು ಎಂದು ಹೇಳಿ ರೂಂಗೆ ತೆರಳಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಷಯ ತಿಳಿದು ತಂದೆ ತಾಯಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.