ಪುತ್ತೂರು: ಹಿಂದೂ ಜಾಗರಣ ವೇದಿಕೆ ತ್ಯಾಗರಾಜ ನಗರ ವತಿಯಿಂದ ರಕ್ತದಾನ ಶಿಬಿರ ಮತ್ತು ರಕ್ತದಾನದ ಮಾಹಿತಿಯು ಮಜ್ಜಾರಡ್ಕ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ದೀಪ ಬೆಳಗಿಸುವುದರ ಮೂಲಕ ಅರಿಯಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ್ ಮನಿಯಾಣಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿ ರಾಮಚಂದ್ರ ಭಟ್ ರಕ್ತದಾನ ಮತ್ತು ರಕ್ತದಾನದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ರೇಖಾ ಬಾಲಕೃಷ್ಣ, ಉದ್ಯಮಿಗಳಾದ ಲಂಬೋಧರ ಪೂಂಜಾ ಗೋಳ್ತಿಲ ಮತ್ತು ಹಿಂಜಾವೇ ತಾಲೂಕು ಅಧ್ಯಕ್ಷರಾದ ಅಶೋಕ್ ತ್ಯಾಗರಾಜ ನಗರ ಉಪಸ್ಥಿತರಿದ್ದರು.
ಶಿವರಾಮ ಪಾಟಾಲಿ ಅಮೈ ಅತಿಥಿಗಳನ್ನು ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು. ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಮಣಿಯಾಣಿ, ಅಂಗನವಾಡಿ ಕಾರ್ಯಕರ್ತೆ ವಸಂತಿ ಕೋಡಿಯಡ್ಕ, ಸಹಾಯಕಿ ಹೊನ್ನಮ್ಮ ಸ್ವಾಮಿನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲಿ ಪಾಲ್ಗೊಂಡರು.