ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ಶೀಘ್ರ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಹಲವು ಮಂದಿ ಬಿಜೆಪಿ ಸೇರ್ಪಡೆಗೆ ಕಾದು ಕುಳಿತಿದ್ದಾರೆ. 10ಕ್ಕೂ ಹೆಚ್ಚು ಶಾಸಕರು ಈಗಾಗಲೇ ಸಂಪರ್ಕದಲ್ಲಿದ್ದಾರೆ. ಚುನಾವಣೆ ನಡೆಯುವ ಮೊದಲು ಇವರೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದರು.
ಗೆಲ್ಲುವ ಅಭ್ಯರ್ಥಿಗಳೇ ಹಲವು ಜನ ಬಿಜೆಪಿಗೆ ಬರಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಹಲವರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.