ಮಂಗಳೂರು: ಟ್ರಕ್‌ನ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಜಪ್ಪಿನಮೊಗರು ಮತ್ತು ನಡುಮೊಗರು ನಡುವಿನ ರಾಷ್ಟ್ರೀಯ ಹೆದ್ದಾರಿ 66 ನಲ್ಲಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಸವಾರನನ್ನು ರೊನಾಲ್ಡ್ (59) ಎಂದು ಗುರುತಿಸಲಾಗಿದೆ.
ರೊನಾಲ್ಡ್ ಕೆಲಸ ನಿಮಿತ್ತ ನಗರಕ್ಕೆ ಆಗಮಿಸಿ ಕೊಣಾಜೆಯಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅತಿ ವೇಗವಾಗಿ ಬಂದ ಲಾರಿ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದು ಬಳಿಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಇದರಿಂದ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.