ರಾಮನಗರ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಮರ ಬಿದ್ದು ಪರಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ನಡೆದಿದೆ.
ಸುಂದ್ರಶ್ (49) ತನ್ಮಯ್ (9) ಮೃತ ದುದೈವಿಗಳು. ಘಟನೆ ಸಂದರ್ಭದಲ್ಲಿ ಕಾರಿನಲ್ಲಿದ್ದ ಶೀಲ, ಗಾನವಿ, ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಂದೇ ಕುಟುಂಬ ಐದು ಮಂದಿ ಕಾರಿನಲ್ಲಿ ಮದ್ದಣುರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಬೆಳಗ್ಗೆ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಗಾಯಗೊಂಡ ಮೂವರನ್ನ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತ ಮರ ರಸ್ತೆಗೆ ಉರುಳಿ ಕಾರಿನ ಮೇಲೆ ಬಿದ್ದ ಪರಿಣಾಮ ಬೆಂಗಳೂರು ಮೈಸೂರು ಹೆದ್ಧಾರಿ ಕೆಲ ಸಮಯ ಬಂದ್ ಆಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಮರ ತೆರವು ಮಾಡಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.