ವಾಷಿಂಗ್ಟನ್: ವಿಶ್ವದ ಪ್ರಮುಖ ಜಾಲತಾಣ ಟ್ವಿಟ್ಟರ್ ಕಂಪನಿಯನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಪ್ರತಿ ಷೇರಿಗೆ 54.20 ಡಾಲರ್ನಂತೆ 44 ಶತಕೋಟಿ ಡಾಲರ್ಗೆ ಟ್ವಿಟರ್ ಕಂಪನಿಯನ್ನು ಮಸ್ಕ್ ಖರೀದಿಸಿದ್ದಾರೆ.
‘ಎಲಾನ್ ಮಸ್ಕ್ ಅವರಿಗೆ ಟ್ವಿಟ್ಟರ್ ಮಾರಾಟ ಮಾಡಲಾಗಿದೆ. ಈಗ ಟ್ವಿಟ್ಟರ್ ಸಂಪೂರ್ಣವಾಗಿ ಎಲಾನ್ ಮಸ್ಕ್ ಮಾಲೀಕತ್ವದ ಕಂಪನಿ’ ಎಂದು ಮಾರಲಾಗಿದೆ ಟ್ವಿಟರ್ ಅಧ್ಯಕ್ಷ ಬ್ರೈಟ್ ಟೈಲರ್ ಹೇಳಿದ್ದಾರೆ. ಈವರೆಗೆ ಟ್ವಿಟರ್ನಲ್ಲಿ ಎಲಾನ್ ಮಸ್ಕ್ ಶೇ 10ರಷ್ಟು ಷೇರು ಹೊಂದಿದ್ದರು. ಮಸ್ಕ್ ಸಹ ಟ್ವಿಟರ್ ಖರೀದಿಯನ್ನು ದೃಢಪಡಿಸಿದ್ದಾರೆ.‘ನನ್ನನ್ನು ಕೆಟ್ಟದಾಗಿ ಟೀಕಿಸುವವರು ಸಹ ಟ್ವಿಟರ್ನಲ್ಲಿಯೇ ಉಳಿಯಬೇಕೆಂದು ಬಯಸುತ್ತೇನೆ. ವಾಕ್ ಸ್ವಾತಂತ್ರ್ಯ ಎಂದರೆ ಅದೇ ತಾನೆ’ ಎಂದು ಮಸ್ಕ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಟ್ವಿಟರ್ ಖರೀದಿಯನ್ನು ‘Yessss’ ಎಂದು ಸಂಭ್ರಮಿಸಿರುವ ಅವರು, ‘ವಾಕ್ ಸ್ವಾತಂತ್ರ್ಯವು ಕಾರ್ಯರೂಪದಲ್ಲಿರುವ ಯಾವುದೇ ಪ್ರಜಾಪ್ರಭುತ್ವದ ತಳಹದಿಯಾಗಿದೆ. ಟ್ವಿಟರ್ ಎನ್ನುವ ಡಿಜಿಟಲ್ ಜಗಲಿಯಲ್ಲಿ ಮನುಷ್ಯತ್ವದ ಭವಿಷ್ಯದ ಬಗ್ಗೆ ಚರ್ಚೆಯಾಗುತ್ತದೆ. ಟ್ವಿಟರ್ನ ಆಲ್ಗೊರಿದಂಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಷ್ಟೇ ಅಲ್ಲದೆ, ಎಲ್ಲರನ್ನೂ ತಲುಪುವಂತೆ ಮಾಡಬೇಕಿದೆ. ಟ್ವಿಟರ್ಗೆ ಅಗಾಧವಾಗಿ ಬೆಳೆಯುವ ಸಾಮರ್ಥ್ಯವಿದೆ. ಅದನ್ನು ಸಾಧ್ಯವಾಗಿಸಲು ಕಂಪನಿಯೊಂದಿಗೆ, ಬಳಕೆದಾರರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ’ ಎಂಬ ತಮ್ಮದೇ ಹೇಳಿಕೆಯ ತುಣುಕನ್ನು ಅವರು ಟ್ವೀಟ್ ಮಾಡಿದ್ದಾರೆ.
ಎಲಾನ್ ಮಸ್ಕ್ ಟ್ವಿಟ್ಟರ್ ಖರೀದಿಸಿಸಬಹುದು ಎಂಬ ಮಾತುಗಳು ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು. ಟ್ವಿಟ್ಟರ್ ತನ್ನ ಬಿಡ್ ಅನ್ನು ಹೆಚ್ಚಿಸಲು ಮಸ್ಕ್ ಮೇಲೆ ಒತ್ತಡ ಹೇರುವುದಕ್ಕೆ ಮಾರಾಟವನ್ನು ಯಾವ ದರಕ್ಕೆ ಕೇಳಬೇಕು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಒಪ್ಪಂದದ ಚರ್ಚೆಗಳು ಗೋಪ್ಯವಾಗಿ ಇರುವುದರಿಂದ ವಿಷಯದ ಬಗ್ಗೆ ತಿಳಿದಿರುವ ಜನರು ತಮ್ಮ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಯುಎಸ್ ಸೆಕ್ಯೂರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ) ಸೇರಿದಂತೆ ಇತರ ನಿಯಂತ್ರಕರಿಂದ ಮಸ್ಕ್ ವಿರುದ್ಧ ಇರುವ ಸಕ್ರಿಯ ತನಿಖೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಟ್ವಿಟ್ಟರ್ ಬಯಸುತ್ತಿದೆ. ಮಾರಾಟದ ಮೇಲೆ ಅದು ಪರಿಣಾಮ ಬೀರುತ್ತಿದೆ ಎಂದು ಮೂಲಗಳು ತಿಳಿಸಿವೆ.