ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಎಂ.ಆರ್.ಪಿ. ಎಲ್. ನ ಸಿ.ಎಸ್. ಆರ್. ನಿಧಿಯಿಂದ ನಿರ್ಮಾಣಗೊಂಡ ’10 ಕೊಠಡಿಗಳ ಉದ್ಘಾಟನಾ ಸಮಾರಂಭ’ ಮತ್ತು ‘ಶತಮಾನೋತ್ಸವ’ ಕಾರ್ಯಕ್ರಮ ಮೇ.1 ರಂದು ನಡೆಯಲಿದೆ.
ಮೇ.1 ರಂದು ಅಪರಾಹ್ನ 3 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವರಾದ ಸುನೀಲ್ ಕುಮಾರ್ ರವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್. ಎಲ್. ಬೋಜೆ ಗೌಡ, ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್, ಮಾಜಿ ಸಚಿವರಾದ ರಮಾನಾಥ್ ರೈ, ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಾನ್ಯ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜ್ಞಾನೇಶ್ ಎಂ.ಪಿ., ತಿರುಮಲ ಕುಮಾರ್ ಮಜಿ, ಪ್ರಕಾಶ್ ಅಂಚನ್ ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ.