ಪುತ್ತೂರು: ಗೃಹ ರಕ್ಷಕ ಸಿಬ್ಬಂದಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಆತನನ್ನು ಕೆಲಸದಿಂದ ಅಮಾನತುಗೊಳಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಗೃಹ ರಕ್ಷಕ ದಳದ ಸಿಬ್ಬಂದಿಯಾಗಿರುವ ಸಾಲ್ಮರ ನಿವಾಸಿ ಸಲಾಮ್ಮುದ್ದೀನ್ ನೌಷದ್ ಎಂಬಾತ ಕಟೀಲು ಜಾತ್ರೋತ್ಸವ ಸಂದರ್ಭದಲ್ಲಿ ನಡೆಯುವ ತೂಟೆದಾರ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಶಾಸಕ ಸಂಜೀವ ಮಠಂದೂರು ರವರು, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ರವರ ಗಮನಕ್ಕೆ ತಂದಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡ ಅವರು ತನಿಖೆಗಾಗಿ ಆದೇಶ ನೀಡಿ, ಆತನನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.