ವಿಟ್ಲ: ಕಟ್ಟಡ ಕಾಮಗಾರಿ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಲಕ್ನೋ ಮೂಲದ ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಚರ್ಚ್ ಅಧೀನಕ್ಕೊಳಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಕಾರ್ಮಿಕ ಜಯಪ್ರಕಾಶ್(25) ಮೃತ ದುರ್ದೈವಿ.
ಎ.26 ರಂದು ಸಂಜೆ ಈ ದುರ್ಘಟನೆ ನಡೆದಿದ್ದು, ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.