ಬೆಟ್ಟಂಪ್ಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲಿನಲ್ಲಿ ನಡೆಸಲಾಯಿತು.

ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಹರಿಪ್ರಸಾದ್ ಎಸ್ ಇವರು ಮಾತನಾಡಿ ಒಟ್ಟು ಶಿಬಿರದ ರೂಪುರೇಷೆಗಳನ್ನು ಮುಂದಿಟ್ಟರು ಹಾಗೂ ಈ ಶಿಬಿರ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿನ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಇವರು ಮಾತನಾಡಿ ಈ ಶಿಬಿರಕ್ಕೆ ಶಾಲೆಯ ವತಿಯಿಂದ ಹಾಗೂ ಊರಿನವರ ವತಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಕೊಡಲಾಗುವುದು ಎಂದರು.

ಪುಣಚ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಲಾವಣ್ಯ ಪಿ ಇವರು ಪಂಚಾಯತ್ ನ ಕಡೆಯಿಂದ ಅಗತ್ಯ ಸಹಕಾರವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ದಾಮೋದರ ಕಣಜಾಲು, ದೀಕ್ಷಿತ್ ಕುಮಾರ್, ಎನ್ಎಸ್ಎಸ್ ಘಟಕ ನಾಯಕ ಸಾರ್ಥಕ್ ಟಿ,ಪುಣಚ ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.