ಸುಬ್ರಹ್ಮಣ್ಯ: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ.
ಮೈಸೂರು ವಿವೇಕಾನಂದ ನಗರ ನಿವಾಸಿ ನಂಜಮ್ಮ ಕ್ಷೇತ್ರದ ಭೇಟಿಗಾಗಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಸ್ನಾನಘಟ್ಟದಲ್ಲಿ ಸ್ನಾನ ಮಾಡಿ ಹಿಂತಿರುಗುವ ವೇಳೆ ಸುಮಾರು 75 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ.
ಹಾಡುಹಗಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಆದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದ ಶ್ರೀಮಂತ ದೇಗುಲದ ಆವರಣದಲ್ಲಿ ಹಾಡುಹಗಲೇ ಕಳವಾದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.