ಮಂಗಳೂರು: ಕಳೆದ ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯುವ ರಾಜಕಾರಣಿ ‘ಝೋಮ್ಯಾಟೋ ಗರ್ಲ್’ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ನಿಧನರಾಗಿದ್ದಾರೆ.
ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಮೇಘನಾ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಈ ಹಿಂದೆ ಝೋಮ್ಯಾಟೋ ಫುಡ್ ಡೆಲಿವರಿ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ ಅವರು 2019 ರಲ್ಲಿ ಮಂಗಳೂರು ಮಹಾ ನಗರಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಣ್ಣಗುಡ್ಡ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ನಂತರ ಚುನಾವಣೆಯಲ್ಲಿ ಸೋತರು , ಮತ್ತೆ ತಮ್ಮ ಪುಡ್ ಡೆಲಿವರಿ ಕೆಲಸಕ್ಕೆ ಮರಳಿದ್ದರು.
ಈ ನಡುವೆ ಅವರಿಗೆ ಆರೋಗ್ಯ ಕೈಕೊಟ್ಟ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮತ್ತೆ ಆರೋಗ್ಯ ಹದಗೆಟ್ಟೆ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.