ಶ್ರೀಲಂಕಾ ಮೂಲದ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಇಡಿ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತುಇತರರ ವಿರುದ್ಧ ತನಿಖೆಗೆ ಸಂಬಂಧಿಸಿದಂತೆ ಜಾಕ್ವೆಲೀನ್ ಅವರ 7 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.
ಮೂಲಗಳ ಪ್ರಕಾರ ಬಂಧಿತ ಆರೋಪಿ ಚಂದ್ರಶೇಖರ್ ಜಾಕ್ವೆಲೀನ್ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ಇಡಿ ಆರೋಪ ಮಾಡಿದೆ. ಈ ಕುರಿತು ಜಾಕ್ವೆಲೀನ್ ಜಾರಿ ನಿರ್ದೇಶನಾಲಯಕ್ಕೆ ನೀಡಿದ ಹೇಳಿಕೆಯಲ್ಲಿ ತಾನು ಚಂದ್ರಶೇಖರ್ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಸೇರಿದಂತೆ ಉನ್ನತ ವ್ಯಕ್ತಿಗಳನ್ನು ವಂಚಿಸಿ ಸುಲಿಗೆ ಮಾಡಿದ ಹಣದಿಂದ ಈ ಉಡುಗೊರೆಗಳನ್ನು ಆರೋಪಿ ಖರೀದಿಸಿದ್ದರು ಎಂದು ಇಡಿ ಹೇಳಿದೆ.