ವಿಟ್ಲ: ವಿಶ್ವ ಹಿಂದು ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಶ್ರೀ ರಾಮೋತ್ಸವ ಸಮಿತಿ ವತಿಯಿಂದ ನಡೆಯುವ ಶ್ರೀ ರಾಮ ಭಜನಾಮೃತ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿಸಿದರು.

ಈ ಸಂದರ್ಭ ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೃಷ್ಣಯ್ಯ ವಿಟ್ಲ ಅರಮನೆ ,ಅಧ್ಯಕ್ಷರಾದ ಚರಣ್ ಕಾಪುಮಜಲು ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಹಾಗೂ ಶ್ರೀರಾಮ ಭಕ್ತರು ಉಪಸ್ಥಿತರಿದ್ದರು.
