ಕಡಬ: ಮಾಂಸಕ್ಕಾಗಿ ದನ ಕಡಿಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಕಡಬ ಪೋಲಿಸರು ದಾಳಿ ನಡೆಸಿದ ಘಟನೆ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ನಡೆದಿದೆ.

ದಾಳಿ ವೇಳೆ ಅರ್ಧ ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿರುವ ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಡಬ ಎಸ್.ಐ. ಆಂಜನೇಯ ರೆಡ್ಡಿ, ಎ.ಎಸ್.ಐ.ಸುರೇಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಆರೋಪಿ ಫಾರೂಕ್ ಹಾಗೂ ಇತರರು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ಸ್ಥಳೀಯರು ಹಾಗೂ ಸಾರ್ವಜನಿಕರು ಜಮಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿದೆ.
