ಪುತ್ತೂರು: ಪಕ್ಕಕ್ಕೆ ನಿಲ್ಲಿಸಲು ತಳ್ಳಿಕೊಂಡು ಹೋಗುತ್ತಿದ್ದ ವೇಳೆ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮೇ.1 ರಂದು ಬೊಳ್ವಾರಿನಲ್ಲಿ ನಡೆದಿದೆ.

ರಸ್ತೆ ಬದಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಪಕ್ಕಕ್ಕೆ ನಿಲ್ಲಿಸಲು ತಳ್ಳಿಕೊಂಡು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹೊಂಡ ಬಿದ್ದಿದೆ ಎನ್ನಲಾಗಿದೆ.

ಘಟನೆಯಿಂದಾಗಿ ಆಟೋ ರಿಕ್ಷಾದ ಮುಂಭಾಗ ನಜ್ಜುಗುಜ್ಜಾಗಿದೆ. ನಿಲ್ಲಿಸಿದ್ದ ಆಟೋದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
