ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ರವರು ಪುತ್ತೂರು ಘಟಕದ ಗೃಹರಕ್ಷಕದಳಕ್ಕೆ ಭೇಟಿ ನೀಡಿ ಗೃಹರಕ್ಷಕರ ಕುಂದು ಕೊರತೆಗಳನ್ನು ವಿಚಾರಿಸಿದರು.
ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ರವಾನಿಸಿ ಆಕ್ರೋಶಕ್ಕೆ ಗುರಿಯಾಗಿದ್ದ ಸಲಹುದ್ದಿನ್ ನೌಷದ್ ರವರನ್ನು ಜಿಲ್ಲಾ ಗೃಹರಕ್ಷಕದಳ ಕಚೇರಿಗೆ ವಿಚಾರಣೆಗೆ ಬರಲು ಆದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ, ಜಗನ್ನಾಥ್ ಹಾಗೂ ಗೃಹರಕ್ಷಕ, ಗೃಹರಕ್ಷಕಿಯರು ಉಪಸ್ಥಿತರಿದ್ದರು.