ತಿರುವನಂತಪುರ: ಶವರ್ಮಾ ಸೇವಿಸಿದ ನಂತರ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನ ಚೆರುವತ್ತೂರು ಪಟ್ಟಣದಲ್ಲಿ ನಡೆದಿದೆ.
ರೆಸ್ಟೋರೆಂಟ್‌ನಲ್ಲಿ ಆಹಾರ ಸೇವಿಸಿದ್ದ ಉಳಿದ 18 ವಿದ್ಯಾರ್ಥಿಗಳು ಕೂಡ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಂದನಾ (16) ಮೃತಪಟ್ಟ ಬಾಲಕಿ.
ಮಕ್ಕಳ ತಜ್ಞರನ್ನೊಳಗೊಂಡ ವೈದ್ಯರ ತಂಡವು ಎಷ್ಟೇ ಪ್ರಯತ್ನಿಸಿದರೂ ದೇವನಂದನಾಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಫುಡ್ ಪಾಯಿಸನ್‌ನಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂಬುವುದು ತಿಳಿದು ಬಂದಿದೆ.
ಆಸ್ಪತ್ರೆಗೆ ದಾಖಲಾದ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ ರಾಮದಾಸ್ ಹೇಳಿದ್ದಾರೆ.
ಘಟನೆಯ ಬಳಿಕ ರೆಸ್ಟೋರೆಂಟ್‌ನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮಾಹಿತಿ ನೀಡಿದ್ದಾರೆ.