ಮಂಗಳೂರು: ರಸ್ತೆ ಬದಿಯಲ್ಲಿ ವಾಹನಗಳನ್ನು ಅಡ್ಡಲಾಗಿಟ್ಟು ಸಂಚಾರಕ್ಕೆ ತಡೆಯುಂಟು ಮಾಡಿ ನಮಾಜು ಮಾಡಿದ ಘಟನೆ ಮಂಗಳೂರಿನ ಹೊರವಲಯದ ಕೋಟೆಕಾರು ಎಂಬಲ್ಲಿ ನಡೆದಿದೆ.

ರಸ್ತೆ ಬದಿಯಲ್ಲಿ ವಾಹನಗಳನ್ನು ಅಡ್ಡಲಾಗಿಟ್ಟು ಸಂಚಾರಕ್ಕೆ ತಡೆಯುಂಟು ಮಾಡಿ ನಮಾಜು ಮಾಡಿದ್ದು, ಈ ಬಗೆಗಿನ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಪೊಲೀಸರು ಯಾವುದೇ ಕ್ರಮಕೈಗೊಳ್ಳದೆ ಸುಮ್ಮನಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯನ್ನು ಶಾಸಕರಾದ ಭರತ್ ಶೆಟ್ಟಿ ರವರು ಖಂಡಿಸಿದ್ದು, ಶೀಘ್ರ ಕಾನೂನು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.