ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕುಂಬ್ರ ಅರಿಯಡ್ಕ ನಿವಾಸಿ ಅದಂ ರವರ ಮಗ ಸಿನಾನ್(18) ಎಂದು ಗುರುತಿಸಲಾಗಿದೆ.


ಲಾರಿ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
