ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು, ಈ ಘಟನೆಗೆ ಮತ್ತೊಂದು ಹೊಸ ತಿರುವು ದೊರಕಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿಗೆ ಮುಸ್ಲಿಂ ಯುವಕ ಪ್ರೀತಿಯ ನಾಟಕವಾಡಿ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿದೆ.

ಕನ್ಯಾನ ಗ್ರಾಮದ ತಲೆಕ್ಕಿಯ ಸಾಹುಲ ಹಮೀದ್ ಎಂಬಾತ ವಿದ್ಯಾರ್ಥಿನಿಯ ಜೊತೆಗೆ ಪ್ರೇಮದ ನಾಟಕವಾಡಿ ಮಾನಸಿಕ ಹಿಂಸೆ ನೀಡಿದ್ದಾನೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಈ ಬಗ್ಗೆ ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಹಿಂಪ ಬಜರಂಗದಳ ವಿಟ್ಲ ಪ್ರಖಂಡ ಒತ್ತಾಯಿಸಿ ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್ ಇ ನಾಗರಾಜ್ ಅವರಿಗೆ ಮನವಿ ಮಾಡಿದ್ದಾರೆ.
ಮನವಿ ಸಲ್ಲಿಸುವ ವೇಳೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರಾದ ಚಂದ್ರಹಾಸ ಕನ್ಯಾನ, ಯತೀಶ್ ಪೆರುವಾಯಿ ಸೇರಿದಂತೆ ಮೊದಲಾದವರು ಜೊತೆಗಿದ್ದರು.