ಪುತ್ತೂರು: ಪಾದಾಚಾರಿ ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿ ಎಂಬಲ್ಲಿ ನಡೆದಿದೆ.
ದ್ವಿಚಕ್ರ ವಾಹನ ಸವಾರ ಕುಂಜಣ್ಣಾ ರೈ ಎಂಬವರು ಪಾದಚಾರಿ ಗಿರಿಧರ ಎಂಬವರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಅಪಘಾತದಿಂದಾಗಿ ಗಾಯಗೊಂಡಿದ್ದ ಪಾದಚಾರಿ ಗಿರಿಧರ ರವರನ್ನು ಪುತ್ತೂರು ಜಿಲ್ಲಾ ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರು ರವರು ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.