ವಿಟ್ಲ: ಆತ್ಮಹತ್ಯೆ ಮಾಡಿಕೊಂಡ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿನಿ ಮನೆಗೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಹಾಗೂ ಇತರರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದರು.

ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಬಾಲಕಿ ಸಾವನ್ನಪ್ಪಿದ್ದಾಳೆ. ಮೇಲ್ನೋಟಕ್ಕೆ ಆತ್ಮಹತ್ಯೆ ದಾಖಲಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ ಹಾಕಿಸಿ ಅವಳನ್ನು ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಬಾಲಕಿಯ ಮನೆಯವರು ಆರೋಪಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ರವರು ಬಾಲಕಿಯ ಮನೆಗೆ ತೆರಳಿ ಮನೆಯವರಿಗೆ ಸಾಂತ್ವನ ಹೇಳಿದ್ದು, ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯವಾಗಿದೆ. ಅಲ್ಲದೆ ಈ ಸಾವಿಗೆ ಕಾರಣವಾದ ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
