ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಕಣಿಯೂರು ತಲೆಕ್ಕಿ ಎಂಬಲ್ಲಿಯ ಸಾಹುಲ್ ಹಮೀದ್@ಕುಟ್ಟ ಎನ್ನಲಾಗಿದೆ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ನೇಣಿಗೆ ಶರಣಾದ ವಿದ್ಯಾರ್ಥಿನಿ.
ಮಗಳ ಸಾವಿಗೆ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಕಾರಣ ಎಂದು ಆಕೆಯ ತಂದೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಈ ಹಿನ್ನೆಲೆ ಆರೋಪಿ ಸಾಹುಲ್ ಹಮೀದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಠಾಣೆಯಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳ ಸಾಹುಲ್ ಹಮೀದ್ ನ ವಿರುದ್ಧ ಅ.ಕ್ರ 68/2022 ಕಲಂ:305 IPC & -3 (2)(v), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಾಗಿದೆ.