ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡ ಗಾಯಾಳುವಿನಿಂದ ಬೆದರಿಸಿ ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ.
ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಮಧುಸೂದನ್ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12:30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್‌ವರ್ಕ್ ಸಮಸ್ಯೆ ಕೂಡಾ ಇದ್ದುದರಿಂದ ಕಾರಿನಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯ ಮಧುಸೂದನ್ ಎಂಬುವವರು ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಕೃತ್ಯ ಎಸಗಿದ ಬೆಳ್ತಂಗಡಿ ಮೂಲದ 3 ಯುವಕರನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.