ಸುಳ್ಯ: ಬಾಡಿಗೆ ಮನೆಯಲ್ಲಿದ್ದ ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ.
ಮೃತ ಯುವತಿಯನ್ನು ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎನ್ನಲಾಗಿದೆ.

ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಯುವತಿ ಮೃತಪಟ್ಟಿದ್ದಾರೆಂದು ತಿಳಿಸಿದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಆಯೀಶಾಳನ್ನು ಕಳೆದ ವರ್ಷವಷ್ಟೇ ಕಾಸರಗೋಡು ಮಂಙಪಾರೆಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.