ಪುತ್ತೂರು: ಕೆಲ ದಿನಗಳ ಹಿಂದೆ ಕೆದಿಲ ಸಮೀಪ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಬಂಧಿತನಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕೆದಿಲ ಸತ್ತಿಕಲ್ಲು ಎಂಬಲ್ಲಿ ಅಕ್ರಮವಾಗಿ ಕಸಾಯಿಖಾನೆ ಕಾರ್ಯಾಚರಿಸುತ್ತಿದ್ದ ಕುರಿತು ಹಿಂದೂ ಸಂಘಟನೆ ಕಾರ್ಯಕರ್ತರು ನೀಡಿದ್ದ ಮಾಹಿತಿಯಾಧರಿಸಿ ಪೊಲೀಸರು ದಾಳಿ ನಡೆಸಿದ್ದರು.
ಈ ಸಂದರ್ಭದಲ್ಲಿ ಅಲ್ಲಿ ಗೋವನ್ನು ವಧೆ ಮಾಡುತ್ತಿದ್ದ ಆರೋಪಿ ಸತ್ತಾರ್ ಎಂಬಾತನನ್ನು ಪೊಲೀಸರು ಬಂಧಿಸಿ, 70 ಕೆ.ಜಿ. ಗೋಮಾಂಸ ವಶಪಡಿಸಿಕೊಂಡಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿ ಪರ ವಕೀಲ ರಾಕೇಶ್ ಮಸ್ಕರೇನ್ಹಸ್ ವಾದಿಸಿದರು.