ಉಡುಪಿ: ಮಾಜಿ ಸಚಿವ ಉಡುಪಿಯ ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಹುದ್ದಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ತಾವು ರಾಜೀನಾಮೆ ಸಲ್ಲಿಸುತ್ತಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಕಳೆದ 3-4 ತಿಂಗಳುಗಳಿಂದ ಪ್ರಮೋದ್ ಅವರು ಕಾಂಗ್ರೇಸ್ ಗೆ ರಾಜೀನಾಮೆ ಸಲ್ಲಿಸುತ್ತಾರೆ ಹಾಗೂ ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು.