ಬೆಂಗಳೂರು: ಪ್ರಮೋದ್ ಮಧ್ವರಾಜ್ ರವರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರವರ ನೇತೃತ್ವದಲ್ಲಿ ಬಿಜೆಪಿಯ ಧ್ವಜ ಪಡೆದು ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ಗಂಟೆಯೊಳಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
