ವಿಟ್ಲ: ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿ, ಅವರಿಗೆ ಧೈರ್ಯ ತುಂಬಿದರು.

ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆಯಾಗುವಂತಾಗಬೇಕು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರಿಗೂ ಶಿಕ್ಷೆಯಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖರಾಗಿರುವ ರಾಧಾಕೃಷ್ಣ ಅಡ್ಯಂತಾಯ ರವರು ಆಗ್ರಹಿಸಿದರು.

ಈ ವೇಳೆ ವಿಭಾಗ ಸಂಪರ್ಕ ಪ್ರಮುಖರಾಗಿರುವ ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಭಾಗ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಜಿಲ್ಲಾ ಕಾರ್ಯದರ್ಶಿ ನರಸಿಂಹ ಶೆಟ್ಟಿ ಮಾಣಿ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ತಾಲೂಕ್ ಅಧ್ಯಕ್ಷರಾದ ಗಣೇಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಇರ, ಉಪಾಧ್ಯಕ್ಷರಾದ ರಾಜೇಶ್ ನಾಯಕ್ ಕರೋಪಾಡಿ, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ವಿನೋದ್ ಶೆಟ್ಟಿ ಪಟ್ಲ, ಪಂಚಾಯತ್ ಸದಸ್ಯರಾದ ಅಶ್ವತ್ ಶೆಟ್ಟಿ ಪಟ್ಲ, ಕರೋಪಾಡಿ ಹಿಂದು ಜಾಗರಣ ವೇದಿಕೆ ಅಧ್ಯಕ್ಷರಾದ ರಮೇಶ್ ಲಕ್ಷ್ಮಣ್ ಕರೋಪಾಡಿ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಪರ್ಕ ಪ್ರಮುಖ್ ಅವಿನಾಶ್ ಪುತ್ತೂರು, ಪುತ್ತೂರು ಪ್ರಧಾನ ಕಾರ್ಯದರ್ಶಿ ದಿನೇಶ್ ಪಂಜಿಗ, ಲಕ್ಷ್ಮಣ್ ಕರೋಪಾಡಿ, ಸ್ವಸ್ತಿಕ್ ಪುತ್ತೂರು, ಪ್ರಶಾಂತ್ ಮುಡಿಪು, ಹರೀಶ್ ಮುಡಿಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು.