ಉಪ್ಪಿನಂಗಡಿ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನೀಡುವ 2020ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನದಲ್ಲಿ ಯಾರಿಗೆಲ್ಲಾ ಪದಕ ಸಿಗಲಿದೆ ಎಂಬ ಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿ.ಪಿ.ಸಿ ಪ್ರವೀಣ್ ರೈ ಅವರು 2020 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರಧಾನಕ್ಕೆಭಾಜನರಾಗಿದ್ದಾರೆ.
ಇವರು 2008ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಪಾಂಡೇಶ್ವರ, ವಿಟ್ಲ, ಮತ್ತು ಉಪ್ಪಿನಂಗಡಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಅಪರಾಧ ಪತ್ತದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನೇಕ ಕೊಲೆ, ದರೋಡೆ, ಕೋಮು ಗಲಭೆ, ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರು ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ವಿಶ್ವನಾಥ ರೈ ಮತ್ತು ಲೀಲಾವತಿ ದಂಪತಿಗಳ ಪುತ್ರ.