ವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್
(37) ರವರು ನಾಪತ್ತೆಯಾದವರಾಗಿದ್ದಾರೆ.

ನವೀನ್ ಪತ್ನಿ ರೇಖಾ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಪತಿ ನವೀನ್ ರವರು ಮೇ.3 ರಂದು ಪುತ್ತೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಆ ಬಳಿಕ ಮರಳಿ ಬಂದಿಲ್ಲ.
ಈ ಬಗ್ಗೆ ಸಂಬಂಧಿಕರ ಸಹಿತ ವಿವಿದೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ವಿಟ್ಲ ಠಾಣಾ ಪೊಲೀಸರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.