ಉಪ್ಪಿನಂಗಡಿ: ಬೈಕ್ ಹಾಗೂ ಹೋಂಡಾ ಆಕ್ಟಿವಾ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ 34 ನೆಕ್ಕಿಲಾಡಿಯ
ಲ್ಯಾಂಪ್ಸ್ ಸೊಸೈಟಿ ಬಳಿ ನಡೆದಿದೆ.

ನೆಕ್ಕಿಲಾಡಿ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾ ವಾಹನ ಹಾಗೂ ಪುತ್ತೂರು ಕಡೆಯಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ.

ಘಟನೆಯಿಂದ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.