ಮಂಗಳೂರು: ನಗರದ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಕಣ್ಣೂರು ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಧ್ರ ಪಿ.ಪಿ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸಾಂಧ್ರ ನಗರದ ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದು, ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




























