ಉಪ್ಪಿನಂಗಡಿ: ಮೂಲದ ಯುವತಿಯೋರ್ವಳು ಅರ್ಹತೆಗೆ ಸೂಕ್ತ ಉದ್ಯೋಗ ಸಿಗಲಿಲ್ಲ ಎಂದು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.
ಸಹನಾ (23 ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಸಹನಾ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಯುವತಿಯಾಗಿದ್ದು, ಕಾಪು ತಾಲೂಕಿನ ಕಟ್ಟಿಂಗೇರಿಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ ವೇಳೆ ವಿಷ ಸೇವಿಸಿದ್ದಳು.
ವಿಷ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಸಹನಾಳನ್ನು ಮಿಷನ್ ಆಸ್ಪತ್ರೆ, ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಯ ಸೇರಿದಂತೆ ಮೂರು ಆಸ್ಪತ್ರೆಗಳಲ್ಲಿ 10 ದಿನ ಚಿಕಿತ್ಸೆ ಕೊಡಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಸಹನಾ ಎಂಬಿಎ ಪದವೀಧರೆಯಾಗಿದ್ದು ಸೂಕ್ತ ಉದ್ಯೋಗ ಸಿಗದ ಹಿನ್ನಲೆ, ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.