ಬೆಂಗಳೂರು: ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕೈಲಾಸ ಪೀಠ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ.

ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.