ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಯೊಂದಿಗೆ ಮುಂಗಾರು ಮಳೆಯೂ ಸೇರಿಕೊಂಡಿದ್ದು ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ.
ಹೇಗಿರಲಿದೆ ವಾತಾವರಣ..?
ಮೇ 13ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಪಾವಗಡ, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದೆ.
ಕರಾವಳಿಗೆ ಇನ್ನಷ್ಟು ವರುಣಕೃಪೆ
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.