ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಕೇಪು ಕಲ್ಲಂಗಳ ಎಂಬಲ್ಲಿ ನಡೆದಿದೆ.

ಪೆರ್ಲ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ಕಲ್ಲಂಗಳ ತಿರುವಿನಲ್ಲಿ ವಿಟ್ಲ ಕಡೆಯಿಂದ ಬರುತ್ತಿದ್ದ ಲಾರಿಯ ಹಿಂಬದಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಿಂದಾಗಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.