ಬೆಂಗಳೂರು: ಬಿಬಿಎಂಪಿ ಹೆರೋಹಳ್ಳಿ ವಾರ್ಡ್ ಬಿಜೆಪಿ ಮುಖಂಡ, ಬ್ಯಾಡರಹಳ್ಳಿ ನಿವಾಸಿ ಅನಂತರಾಜ್ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅನಂತರಾಜ್ ರವರು ಹಲವು ವರ್ಷಗಳಿಂದ ಥೈರಾಯಿಡ್ ಖಾಯಿಲೆಯಿಂದ ಬಳಲುತ್ತಿದ್ದು, ಹಲವು ಬಾರಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ.
ಇದೇ ಕಾರಣಕ್ಕೆ ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.