ವಿಟ್ಲ: ಇಂದು ಸಂಜೆ ವೇಳೆ ಸುರಿದ ಭಾರೀ ಮಳೆಗೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಹೆದ್ದಾರಿಯಲ್ಲಿ ನೆರೆ ನೀರು ಬಂದು ಜನಜೀವನ ಅಸ್ತವ್ಯಸ್ತಗೊಂಡಿತು.

ವಿಟ್ಲ-ಮಂಗಳೂರು ರಸ್ತೆಯಲ್ಲಿ ಖಾಸಗಿ ವ್ಯಕ್ತಿಗಳು ಕಾಮಗಾರಿ ನಡೆಸಿದ್ದರಿಂದ ಚರಂಡಿಗಳಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಇದರಿಂದ ಸಂಜೆ ವೇಳೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಆಟೋ ರಿಕ್ಷಾ ಮತ್ತು ಕಾರು ಅರ್ಧದಷ್ಟು ಮುಳುಗಡೆಯಾಗಿದೆ.

ವಿಟ್ಲ ಪಟ್ಟಣ ಪಂಚಾಯತ್ ಮಳೆಯ ಬಗ್ಗೆ ಯಾವುದೇ ಪೂರ್ವ ಕಾಮಗಾರಿ ನಡೆದ ಕಾರಣ ಈ ರೀತಿಯ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.