ಮಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಮುಂದಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ಟೆಸ್ಟ್ ಪ್ರಮಾಣ ಹೆಚ್ಚಿಸಲು ಮುಂದಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ 2 ನೇ ಅಲೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಟೆಸ್ಟ್ ಹೆಚ್ಚಿಸಲು ಜಿಲ್ಲಾಡಾಳಿತ ಕ್ರಮ ಕೈಗೊಂಡಿದೆ.
ಜಿಲ್ಲೆಯ ಗಡಿ ಪ್ರದೇಶದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ 2ನೇ ಹಂತದ ಕೊರೊನಾ ಟೆಸ್ಟ್ ಮಾಡಿಸಲು ನಿರ್ಧರಿಸಿದೆ. ಜೊತೆಗೆ ಫುಡ್ ಡೆಲಿವರಿ ಬಾಯ್ಸ್ ಹಾಗೂ ಪೆಟ್ರೋಲ್ ಬಂಕ್ ಸಿಬ್ಬಂದಿಗೂ ಕೊರೊನಾ ಟೆಸ್ಟ್ ಮಾಡಿಸಲು ಜಿಲ್ಲಾಡಳಿತ ಮುಂದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಪೆಟ್ರೊಲ್ ಬಂಕ್ ಸಿಬ್ಬಂದಿ, ಸ್ವಿಗ್ಗಿ, ಝೊಮೆಟೊ ಸೇರಿದಂತೆ ಇತರ ಡೆಲಿವರಿ ಸರ್ವಿಸ್ ಗಳಲ್ಲಿರುವ ಸಿಬ್ಬಂದಿಗೆ RTPCR ಟೆಸ್ಟ್ ಮಾಡಿಸಲು ಜಿಲ್ಲಾಡಾಳಿತ ಕ್ರಮ ಕೈಗೊಂಡಿದೆ.