ಸುಳ್ಯ: ವಿದ್ಯಾರ್ಥಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಹಿನ್ನೆಲೆ ಆರೋಪಿಯೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿ.
ಅಶ್ವಿನ್ ಎಂಬಾತ ಪಿಯುಸಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದರಂತೆ ಈ ವಿದ್ಯಾರ್ಥಿನಿ ಕೂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.