ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮೇ.18 ರಂದು ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್ ರಸ್ತೆಯ ನೂಜಿ ತಿರುವಿನ ಬಳಿ ಡಿಕ್ಕಿ ಸಂಭವಿಸಿದೆ.

ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಆತನನ್ನು ಕೂಡಲೇ ಆಟೋ ಚಾಲಕ ರಮೇಶ್ ತೆಂಕಿಲ ರವರು ಕರೆದೊಯ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

