ಮಂಗಳೂರು : ಬೈಕ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕಡಬದ ಯುವಕನೋರ್ವ ಮೃತಪಟ್ಟಿದ್ದಾನೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿಯಾದ ಸನು ಅಬ್ರಹಾಂ (21) ಮೃತ ಯುವಕ. ಸನು ಅಬ್ರಹಾಂ ಯಮಹಾ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಇದೀಗ ಸನು ಅಬ್ರಹಾಂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿತ್ತು.