ಬೆಂಗಳೂರು: 2021-2022ರ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಹೊರಬೀಳಲಿದೆ. ಮುಂದಿನ ವಿದ್ಯಾಭ್ಯಾಸದ ನಿರೀಕ್ಷೆ ಜೊತೆಗೆ ಕಾತುರತೆಯಿಂದ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಉತ್ತರ ಸಿಗಲಿದೆ.
ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ..
ಈ ಬಾರಿ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದ್ದು, 8 ಲಕ್ಷದ 73 ಸಾವಿರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದರು. ಇನ್ನು ರಾಜ್ಯಾದ್ಯಂತ 3 ಸಾವಿರದ 446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದರೆ, ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್‌ಸೈಟ್ www.karresult.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಲಭ್ಯವಾಗಲಿದೆ. ಇಷ್ಟು ದಿನ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾತುರದಿಂದ ಕಾಯ್ತಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ರಿಸಲ್ಟ್ ಸಿಗಲಿದ್ದು, ಭವಿಷ್ಯದ ದಾರಿಗೆ ಉತ್ತರ ದೊರಕಲಿದೆ.