ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಎಸ್. ಎಸ್. ಎಲ್.ಸಿ ಫಲಿತಾಂಶ 2021-22 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮಸ್ಥಾನ ಪಡೆದಿರುತ್ತಾರೆ.

ಧನ್ಯಶ್ರೀ ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾರವರ ಪುತ್ರಿಯಾಗಿದ್ದಾರೆ.
ಇವರ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.