ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಕಿನ್ನಿಗೊಳಿ ಕೊಲ್ಲೂರು ನಿವಾಸಿ ಅಶ್ವಥ ಎನ್ನಲಾಗಿದೆ.
ಅಶ್ವಥ ಬಾಲಕಿಗೆ ಮದುವೆಯ ಭರವಸೆ ನೀಡಿ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಎರಡು ಬಾರಿ ಅತ್ಯಾಚಾರ ಎಸಗಿದ ಕಾರಣ ಬಾಲಕಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಎರಡು ವರ್ಷಗಳ ಹಿಂದೆ ಬಾಲಕಿ ಕಿನ್ನಿಗೋಳಿಗೆ ತನ್ನ ಸ್ನೇಹಿತೆಯ ಮದುವೆಗೆ ತೆರಳಿದ್ದ ವೇಳೆ ಕಿನ್ನಿಗೊಳಿ ಕೊಲ್ಲೂರು ನಿವಾಸಿ ಅಶ್ವಥನ ಪರಿಚಯವಾಗಿತ್ತು. ಬಳಿಕ ಇಬ್ಬರೂ ಮೊಬೈಲ್ನಲ್ಲಿ ಅನ್ಯೋನ್ಯವಾಗಿ ಮಾತನಾಡಿಕೊಂಡಿದ್ದರು. ಕಳೆದ ಜುಲೈನಲ್ಲಿ ಬಾಲಕಿಯು ಅಶ್ವಥನ ಮನೆಗೆ ಹೋಗಿದ್ದ ವೇಳೆ ಅಶ್ವಥನು ಅಲ್ಲೇ ಪಕ್ಕದಲ್ಲಿರುವ ಆತನ ಅಣ್ಣನ ಖಾಲಿಯಿರುವ ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ.
ಆ ನಂತರವೂ ಇಬ್ಬರೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಕಳೆದ ಅ. 24 ರಂದು ಕಾಲೇಜಿಗೆ ರಜೆ ಇದ್ದು, ಆ ದಿನವೂ ಬಾಲಕಿ ಅಶ್ವಥನ ಮನೆಗೆ ಹೋಗಿದಾಗಲೂ ಆತ ಮತ್ತೆ ದೈಹಿಕ ಸಂಪರ್ಕ ಮಾಡಿರುತ್ತಾನೆ. ದೈಹಿಕ ಸಂಪರ್ಕ ಮಾಡಿದ್ದರಿಂದ ಬಾಲಕಿಯು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಲು ಅಶ್ವಥ ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ. ಹೀಗಾಗಿ ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.