ನವದೆಹಲಿ: ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿಮೆ ಮಾಡಿದೆ.
ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪೆಟ್ರೋಲ್ ದರ ಲೀಟರ್‌ಗೆ 9.5 ರೂ. ಮತ್ತು ಡೀಸೆಲ್‌ಗೆ 7 ರೂ. ಇಳಿಕೆ ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ಆದರೆ ಇದೀಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಡಿರುವ ಘೋಷಣೆಯಿಂದ ಸ್ವಲ್ಪ ನಿರಾಳವಾದಂತಾಗಿದೆ.