ನೆಲ್ಯಾಡಿ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.
ಬೆಂಗಳೂರು ಕಡೆಗೆ ಚಲಿಸುತ್ತಿದ್ದ ದುರ್ಗಂಬಾ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ನೆಲ್ಯಾಡಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಲಾರಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯವನ್ನು ಅರಿತು ಬೇಗ ಬೇಗನೆ ಕೆಳಗಿಳಿದು ಅಪಾಯದಿಂದ ಪಾರಾಗಿದ್ದು, ಹೆಚ್ಚಿನ ಸಾವುನೋವಿನಿಂದ ತಪ್ಪಿಸಿಕೊಂಡಿದ್ದಾರೆ.
ಲಾರಿಯ ಚಾಲಕ ಹೊರಬರಲು ಪ್ರಯತ್ನಿಸಿದ್ದಾನಾದರೂ ಸಾಧ್ಯವಾಗಿಲ್ಲ . ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿವೆ. ಲಾರಿ ಚಾಲಕ ಕೊನೆಗೂ ಲಾರಿಯೊಳಗಿಂದ ಕೊನೆಗೂ ಹೊರಬರಲಾಗದೆ, ಅಲ್ಲೇ ಸಿಲುಕಿ ಸಜೀವ ದಹನವಾಗಿದ್ದಾನೆ.
ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಮಾಡಿದ್ದಾರೆ. ಮಧ್ಯರಾತ್ರಿ 12 ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಅವಕಾಶ ಇರಲಿಲ್ಲ.